ತಿಕೋಟಾ: ಅರಿಕೇರಿ ಅಮೋಘಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ದೊಡ್ಡನಗೌಡ ಪಾಟೀಲ
ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಅರಿಕೇರಿ ಗ್ರಾಮದ ಅಮೋಘಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್. ಪಾಟೀಲ ಅವರು ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆ ಹಾಗೂ ರೈತರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ ಅವರು, ಈ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಶ್ರೀ ಮಾಳಿಂಗರಾಯ ಮಹಾರಾಜರೊಂದಿಗೆ ಪಾಲ್ಗೊಂಡಿದ್ದರು.