ಶಿವಮೊಗ್ಗ: ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವಿಕೆ,ಎಚ್ಚರಿಕೆಯಿಂದ ಇರಲು ನಗರದಲ್ಲಿ ಸೂಚನೆ ನೀಡಿದ ಯೋಜನೆಯ ಕಾರ್ಯಪಾಲಕ ಇಂಜಿನಿಯರ್
ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಜುಲೈ.3ರಿಂದ 10 ವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ಸೋಮವಾರ ಪ್ರಕಟಣೆಯ ಮೂಲಕ ಕರ್ನಾಟಕ ನೀರಾವರಿ ನಿಗಮದ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ. ಇನ್ನಾ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು,ಜನ,ಜಾನುವಾರುಗಳೊಂದಿಗೆ ಯಾವುದೇ ಚಟುವಟಿಕೆಗಳನ್ನು ಮಾಡದೆ ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಸೂಚನೆಯನ್ನು ಸಹ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.