ಸಿದ್ಧಾಪುರ: ಕಾಳೇನಳ್ಳಿಯಲ್ಲಿ ನಡೆದ ಸಂತೋಷ ಆತ್ಮಹತ್ಯೆ ಪ್ರಕರಣ ಪಟ್ಟಣದಲ್ಲಿ ಕ್ರಮಕ್ಕೆ ಒತ್ತಾಯಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ
ಸಿದ್ದಾಪುರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ 4ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ ಸಿದ್ದಾಪುರದ ಕಾಳೇನಳ್ಳಿಯಲ್ಲಿ ನಡೆದ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರು. ಲೈಂಗಿಕ ದೌರ್ಜನ್ಯದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮೇಸ್ತಾ, ತೋಟಪ್ಪ ನಾಯಕ ಇದ್ದರು