ಬೆಂಗಳೂರು ಪೂರ್ವ: ಅಕ್ಟೋಬರ್ ಅಂತ್ಯದೊಳಗೆ ಹೆಣ್ಣೂರು - ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಿ - ಡಿ. ಎಸ್. ರಮೇಶ್
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯ ವೈಟ್ ಟಾಪಿಂಗ್ ಹಾಗೂ ಐಟಿಪಿಎಲ್ ರಸ್ತೆಯ ಹೈ ಡೆನ್ಸಿಟಿ ಕಾರಿಡಾರ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪೂರ್ವ ನಗರ ಪಾಲಿಕೆ ಆಯುಕ್ತ ಡಿ. ಎಸ್. ರಮೇಶ್ ಅವರು ಸೆಪ್ಟೆಂಬರ್ 29ರಂದು ಮಧ್ಯಾಹ್ನ 2 ಗಂಟೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿ ಗೆದ್ದಲಹಳ್ಳಿ ರೈಲ್ವೆ ಲೈನ್‌ನಿಂದ ಫರ್ಹಾನ್ ಕಾಲೇಜ್‌ವರೆಗೆ 5 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆಯ ಎರಡೂ ಬದಿಗಳನ್ನು ಒಳಗೊಂಡಂತೆ ಒಟ್ಟು 10 ಕಿ.ಮೀ ಉದ್ದದ ಕಾಮಗಾರಿಯನ್ನು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.