ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚುರ್ಚುಗುಂಡಿ ಗ್ರಾಮ ವಾಸಿ ಪ್ರಭಾಕರ ಎಂಬುವವರ ಮಗ 28 ವರ್ಷದ ಪುನೀತ ಎಂಬ ಯುವಕ ಆಗಸ್ಟ್ -2025 ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯು 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ನೀಲಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಬುಧವಾರ ಸಂಜೆ 4 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.