ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ
Hassan, Hassan | Oct 4, 2025 ಹಾಸನ: ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗ ಅವರು ಕೊನೆ ಉಸಿರು ಇರುವವರೆಗೂ ಕ್ರಿಯಾಶೀಲತೆ ಅಳವಡಿಸಿಕೊಂಡಲ್ಲಿ ಗೌರವಯುತ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಹೇಳಿದರು.ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಮಯಕ್ತ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.