ಮುಂಬೈ ವಿಮಾನ ನಿಲ್ದಾಣದ ಕಸ್ಟಮರ್ ಕೇರ್ ಹೆಸರಿನಲ್ಲಿ ಕರೆ ಮಾಡಿ, ಬೆಲೆಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಘಟನೆ ಗುರುವಾರ ಮಧ್ಯಾಹ್ನ 2 ಗಂಟೆವೆ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಶ್ರೀರಾಮಪುರ ನಿವಾಸಿಯಾದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 2,35,000 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನೀತು ಎಂಬ ಹೆಸರಿನಲ್ಲಿ ದೂರುದಾರ ಮಹಿಳೆಗೆ ಕರೆ ಮಾಡಿದ ವ್ಯಕ್ತಿಗಳು, ನಿಮ್ಮ ಹೆಸರಿನಲ್ಲಿ ಬೆಲೆಬಾಳುವ ಉಡುಗೊರೆ ಬಂದಿದೆ ಎಂದು ಹೇಳಿ, ಅವರ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದಾರೆ. ತದನಂತರ ತಾವು ಮುಂಬೈ ಏರ್ಪೋರ್ಟ್ ಕಸ್ಟಮರ್ ಕೇರ್ನಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದಾರೆ.