ಬೆಂಗಳೂರು ಉತ್ತರ: ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಕುರಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ
ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಕುರಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಬೆಂಗಳೂರಿನಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಗೀತಾ ಕಡಬಾ ಭರತ ರಾಜ್ ಶೆಟ್ಟಿ, ಮುರಳೀಧರ ಪೈ ಬೋರ್ ಕಟ್ಟೆ ಹಾಗೂ ತ್ಯಾಗರಾಜ್ ನಾರಾಯಣ್ ಇನಾವಲ್ಲಿ ಅವರು ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಮಿಟ್ಟಿಲಕೋಡ, ಹೊಸದಾಗಿ ಅಧಿಕಾರ ವಹಿಸಿಕೊಂಡ ಹೆಚ್ಚುವರಿ ನ್ಯಾಯಾಧೀಶರಿಗೆ ಶುಭ ಕೋರಿದರು.