ಸಾಗರ: 2 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಾಗೂ ಸಂಸದರಿಂದ ಹಣ ಬಂದಿಲ್ಲ, ಸಾಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ
Sagar, Shimoga | Sep 15, 2025 ಕಳೆದ ಎರಡು ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಾಗೂ ಸಂಸದರಿಂದ ಹಣ ಬಂದಿಲ್ಲ. ರಾಜ್ಯ ಸರ್ಕಾರದ ಪ್ರಗತಿಪಥ ಯೋಜನೆಯಡಿ ರಸ್ತೆ ಅಭಿವೃದ್ದಿ ಕೆಲಸ ಮುಂದುವರಿಯುತ್ತಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸಾಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ, ಪಿಡಬ್ಲ್ಯೂಡಿ ಮತ್ತು ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸೋಮವಾರ ಸಂಜೆ 5 ಗಂಟೆಗೆ ಮಾತನಾಡಿದ ಅವರು ಕಳೆದ ಮುವತ್ತು ವರ್ಷಗಳ ನಂತರ ಭಾರಿ ಮಳೆ ಹಿನ್ನೆಲೆಯಲ್ಲಿ ರಸ್ತೆ, ಸೇತುವೆಗಳು ಹಾಳಾಗಿದ್ದು, ಮಳೆ ಮುಗಿದ ನಂತರ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು.