ಬೆಂಗಳೂರು ಉತ್ತರ: ನಗರ್ತರಪೇಟೆಯ ಅಗ್ನಿ ಅವಘಡ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ
ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದರು. ಕಾನೂನು ಪಾಲನೆ ಮಾಡದೇ ಚಿಕ್ಕ ಜಾಗದಲ್ಲಿ ಬಿಲ್ಡಿಂಗ್ ಕಟ್ಟಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದಕ್ಕೆ ಮನೆ ಮಾಲೀಕರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯಲ್ಲಿ ಬಡವರು ಜೀವ ಕಳೆದುಕೊಂಡಿದ್ದಾರೆ. ಕಟ್ಟಡ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದರೇ ಬಿಲ್ಡಿಂಗ್‌ಗಳನ್ನ ಹೊಡೆದು ಹಾಕುತ್ತೇವೆ. ಬಾಂಬೆನಲ್ಲೂ ಕೂಡ ಇದೆ ಪರಿಸ್ಥಿತಿ ಇದೆ. ಅಗ್ನಿಶಾಮಕ ವಾಹನಗಳು ಬರೋದಕ್ಕೆ ಆಗೋದಿಲ್ಲ.