ಸಿರಗುಪ್ಪ: ಕೊತ್ತಲಚಿಂತ ಬಳಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ
ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಗ್ರಾಮದಲ್ಲಿ ರತ್ನಮಾರೆಮ್ಮ ಗುಡಿ ಹತ್ತಿರ ಅಕ್ಟೋಬರ್ 17, ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.