ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಸೋಮೇಶ್ವರ ನಗರದ ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ, ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ್ದರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಆರೋಪಿಯಾದ ಬಸವರಾಜ ಹೊಸಮನಿ ಎಂಬಾತರನ್ನು ಕಸಬಾಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.