ಬೆಂಗಳೂರು ಉತ್ತರ: ಸ್ಯಾಂಡಲ್‌ವುಡ್ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.ಅಜಯ್ ರಾವ್ ಹಾಗೂ ಸಪ್ನಾ ಅವರುಗಳು ಪ್ರೀತಿಸಿ ಮದುವೆ ಆಗಿದ್ದರು. 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು. ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ.