ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 52ರಲ್ಲಿ ಹೆಗ್ಗೇರಿ ಹತ್ತಿರದ ಮಾರುತಿ ನಗರದ ಮುಖ್ಯ ರಸ್ತೆಯ ಕಾಮಗಾರಿ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಮಾರ್ಗದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ವೀಕ್ಷಿಸಿ, ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಚೇತನ ಹಿರೇಕೆರೂರ, ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.