ದೊಡ್ಡಬಳ್ಳಾಪುರ: ಸತತ ಎರಡನೆ ವರ್ಷವೂ ತುಂಬಿರುವ ಜಕ್ಕಲಮಡಗು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ ನಗರಕ್ಕೆ ಪ್ರಮುಖ ಕುಡಿಯುವ ನೀರಿನ ಆಸರೆಯಾಗಿರುವ ಜಕ್ಕಲಮಡು ಜಲಾಶಯಕ್ಕೆ ಭರಪೂರ ನೀರು ಹರಿದು ಬಂದಿದ್ದು, ಸತತ ಎರಡನೇ ವರ್ಷವೂ ತುಂಬಿ ಕೋಡಿ ಹರಿದಿದೆ. ಈ ಹಿನ್ನೆಲೆಯಲ್ಲಿ ಇಂದು ಜಕ್ಕಲಮಡು ಜಲಾಶಯಕ್ಕೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.