ಬೆಂಗಳೂರು ಉತ್ತರ: ಶೀಘ್ರವೇ ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ: ನಗರದಲ್ಲಿ ಸಚಿವ ಶಿವರಾಜ್ ತಂಗಡಗಿ
ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾನಿವಾರ ರಾತ್ರಿ 7:30 ರ ಸುಮಾರಿಗೆ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಹಲವು ಬಾರಿ ಚರ್ಚೆ ನಡೆದಿತ್ತು. ಈ ಬಗ್ಗೆ ಶೀಘ್ರವೇ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.