ಹಿರೇಕೆರೂರು: ಸಾಲಬಾಧೆ ತಾಳಲಾರದೇ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ; ಹಾದ್ರಿಹಳ್ಳಿ ಗ್ರಾಮದಲ್ಲಿ ಘಟನೆ
ಹಿರೇಕೆರೂರು ತಾಲೂಕು ಹಾದ್ರಿಹಳ್ಳಿ ಗ್ರಾಮದಲ್ಲಿ ರೈತನೋರ್ವ ಸಾಲಬಾಧೆ ತಾಳಲಾರದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಳಪ್ಪ ಬಸಪ್ಪ ಮುಳಗುಂದ (55) ಮೃತ ದುರ್ದೈವಿ. ಈತ ಜಮೀನು ಕೆಲಸಕ್ಕೆಂದು 1.10 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಮಳೆಯಾಗದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.