ಎಐಸಿಸಿ ಅಧಕ್ಷ ಮಲ್ಲಿಕಾರ್ಜನ್ ಖರ್ಗೆ ನಿವಾಸಕ್ಕೆ ಶನಿವಾರ ಬೆಳಗ್ಗೆಯಿಂದ ಹಲವು ಕಾಂಗ್ರೆಸ್ ನಾಯಕರು ಭೇಟಿ ನೀಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಬರ್ತಾರೋ ಇಲ್ವೋ ಅನ್ನೋ ಗೊಂದಲವಿತ್ತು. ಆದರೆ ರಾತ್ರಿ 8 ಗಂಟೆ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದರು. ಕೊನೆಗೂ ಒಬ್ಬರೇ ಖರ್ಗೆ ನಿವಾಸಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ