ಭಾರತೀಯ ಜನತಾ ಪಕ್ಷ ಕರ್ನಾಟಕ ಮಹಿಳಾ ಮೋರ್ಚಾ ಉತ್ತರ ಕರ್ನಾಟಕ ವಿಭಾಗದ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆಯನ್ನು ಹುಬ್ಬಳ್ಳಿ ನಗರದಲ್ಲಿ ಶನಿವಾರ ಮದ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಹಾಪೌರ ಜ್ಯೋತಿ ಪಾಟೀಲ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರು ಸಿ.ಮಂಜುಳಾ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಇತರರು ಇದ್ದರು.