ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರ ಕುರಿತು ನೀಡಿರುವ ಅವಹೇಳನ ಕಾರಿ ಹೇಳಿಕೆ ಖಂಡನೀಯವಾಗಿದ್ದು, ಅವರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬುಧವಾರ 11 ಗಂಟೆಗೆ ಪ್ರತಿಭಟನೆ ಮಾಡಿದರು. ಮಹಿಳೆ ಕುರಿತು ಅವಹೇಳನವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಹಿಳೆಯರಲ್ಲಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಹೋರಾಟದ ಎಚ್ಚರಿಕೆ ನೀಡಿದರು.