ಕಾರವಾರ: ನಗರದ ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಪೌರತ್ವ ತರಬೇತಿ ಶಿಬಿರ ನಡೆಯಿತು
ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಗೀತಾ ವಾಲಿಕಾರ್ ಅವರು ಸೋಮವಾರ ಮಧ್ಯಾಹ್ನ 12.30ಕ್ಕೆ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿದರು. ನಾಗರಿಕ ಮೌಲ್ಯಗಳನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜವನ್ನು ನಿರ್ಮಾಣ ಮಾಡಿ ಎಂದರು. ಶಿವಾಜಿ ಶಿಕ್ಷಣ ಸಂಸ್ಥೆಯ ಖಜಾಂಚಿ ಕಿಶೋರ ರಾಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಂದನಾ ನಾಯ್ಕ ಸಂಗಡಿಗರು ಪ್ರಾರ್ಥಿಸಿದರು. ಪ್ರಾಚಾರ್ಯರಾದ ಡಾ. ಸುಮನ ಜಿ ಸಾವಂತ ಸ್ವಾಗತಿಸಿದರು. ವಂದನಾ ಮರಾಠಿ ಹಾಗೂ ಶೋಭಾ ಪರಿಚಯಿಸಿದರು