ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿವಾನಂದ ಸರ್ಕಲ್ ಬಳಿಯ ತಮ್ಮ ಗೃಹ ಕಚೇರಿಯಲ್ಲಿ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ ಯೋಚನೆಯಡಿ ಉತ್ತಮ ಕೆಲಸ ಮಾಡುತ್ತಿದೆ ,ಪುಸ್ತಕ ಪ್ರೀತಿ ಎಂಬುದನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ,ಅವು ನಮ್ಮ ಜ್ಞಾನಾರ್ಜನೆಗೆ ನೆರವಾಗುತ್ತದೆ