ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಅರಿವು ಸಪ್ತಾಹ ಕಾರ್ಯಕ್ರಮಕ್ಕೆ ನಗರದ ಹಾಶ್ಮಿಯ ಶಾಲೆಯಲ್ಲಿ ಅವರು ಹಸಿರು ನಿಶಾನೆ ತೋರುವ ಮೂಲಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್ ಚಾಲನೆ ನೀಡಿದರು. ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಂದಿನಿಂದ ಏಳು ದಿನಗಳ ಕಾಲ ರಾಯಚೂರು ಜಿಲ್ಲೆಯಾದ್ಯಂತ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಅರಿವು ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.