ಪಾವಗಡ: ಪಾವಗಡದಲ್ಲಿ ವಿಶ್ವ ಮಧುಮೇಹ ದಿನಾಚರಣೆ: 30 ವರ್ಷ ಮೇಲ್ಪಟ್ಟವರು ಪರೀಕ್ಷೆ ಮಾಡಿಸಿಕೊಳ್ಳಲು ವೈದ್ಯರ ಸಲಹೆ
ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ ಆಚರಿಸಲಾಯಿತು. ಮಧುಮೇಹ ಒಂದು ಮೂಕ ಕಾಯಿಲೆಯಾಗಿದ್ದು, 30 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪಾಲಿಸಬೇಕು ಎಂದು ವೈದ್ಯರು ಸಾರ್ವಜನಿಕರಿಗೆ ಕರೆ ನೀಡಿದರು.