ಕೋಲಾರ: ಕೋಲಾರ ನಗರದಲ್ಲಿ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ
Kolar, Kolar | Oct 29, 2025 ಕೋಲಾರದಲ್ಲಿ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ  ನಟ, ದಿವಂಗತ ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಇಡೀ ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿತ್ತು. ಅವರು ನಿಧನರಾಗಿ ಇಂದಿಗೆ ನಾಲ್ಕು ವರ್ಷಗಳು. ಈ ಹಿನ್ನೆಲೆಯಲ್ಲಿ ನಗರದ ಗಾಂಧಿವನದಲ್ಲಿ ಬುಧವಾರ ಸಂಜೆ ೭ ಗಂಟೆಯಲ್ಲಿ ರಾಶಿರಾಪು ತಂಡದವರು ಹಾಗೂ ಅಪಾರ ಅಭಿಮಾನಿಗಳು ಮೇಣದಬತ್ತಿ ಹಚ್ಚುವ ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತ ಕೆ.ಎಸ್.ಗಣೇಶ್, ಪುನೀತ್ ರಾಜ್ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾದವರು. ಅಪ್ಪು ಇಂದು ನಮ್ಮ ಜೊತೆ ಇಲ್ಲದಿದ್ದರೂ ಅವರ ಸರಳತೆ, ಸಜ್ಜನಿಕೆ