ಹುಬ್ಬಳ್ಳಿಯ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ದಾರೂಢ ಸ್ವಾಮಿ ಮಠ ಹಾಗೂ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ವಿಧಾನಸಭೆಯ ಅರ್ಜಿಗಳ ಸಮಿತಿಯ ವತಿಯಿಂದ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷರು ಹಾಗೂ ಅರ್ಜಿ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಸ್.ಸುರೇಶಕುಮಾರ, ಎ.ಮಂಜು, ಸಿ.ಎನ್.ಬಾಲಕೃಷ್ಣ, ಡಾ.ಅವಿನಾಶ ಜಾಧವ, ಎಚ್.ಡಿ.ತಮ್ಮಯ್ಯ, ದರ್ಶನ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಪಾಲಿಕೆಯ ಆಯುಕ್ತರಾದ ಶ್ರೀ ರುದ್ರೇಶ ಘಾಳಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.