ಮಳವಳ್ಳಿ: ಸಾಲಬಾಧೆಯಿಂದ ಬೇಸತ್ತು ರೈತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ, ಪಟ್ಟಣಕ್ಕೆ ಸಮೀಪದ ಅಂಚೆದೊಡ್ಡಿ ಗ್ರಾಮದಲ್ಲಿ ಘಟನೆ
ಮಳವಳ್ಳಿ : ಸಾಲ ಭಾದೆಯಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ಪಟ್ಟಣಕ್ಕೆ ಸಮೀಪದ ಅಂಚೆದೊಡ್ಡಿ ಗ್ರಾಮ ದಲ್ಲಿ ಜರುಗಿದೆ. ಈ ಗ್ರಾಮದ 56 ವರ್ಷದ ನಂಜೇಗೌಡ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ರೈತ ರಾಗಿದ್ದು ಕಳೆದ ಮಂಗಳವಾರ ಮನೆಯಲ್ಲಿ ಕ್ರಿಮಿನಾಶಕ ಔಷಧ ಸೇವಿಸಿ ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾ ದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಮೃತಪಟ್ಟ ರೆಂದು ವರದಿಯಾಗಿದೆ. ಕೃಷಿ ಕಾರ್ಯಕ್ಕಾಗಿ ಸೊಸೈಟಿ, ಸ್ವಸಹಾಯ ಸಂಘಗಳು ಜೊತೆಗೆ ಖಾಸಗಿ ಸಾಲ ಸೇರಿದಂತೆ ಸುಮಾರು 10 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.