ಮುದ್ದೇಬಿಹಾಳ: ಮುದ್ದೇಬಿಹಾಳದ ಬಿಜ್ಜೂರಿನಲ್ಲಿ ನೂತನ ಪಶು ಚಿಕಿತ್ಸಾಲಯ ಉದ್ಘಾಟನೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಬಿಜ್ಜೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯವನ್ನು ಶಾಸಕ ಅಪ್ಪಾಜಿ ನಾಡಗೌಡ ಪಾಟೀಲ್ ಉದ್ಘಾಟಿಸಿದರು. ರೈತರು ಈ ಆಸ್ಪತ್ರೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.