ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ಎಸ್.ಟಿ. ಕಾಲೋನಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಂಜಗೆರೆ ಅರುಣ್ ಕುಮಾರ್ ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಹಲವು ವರ್ಷಗಳಿಂದ ರಸ್ತೆ ಹದಗೆಟ್ಟು, ಗಬ್ಬೇದ್ದು ನಾರುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದ್ದರು. ಈ ನಡುವೆ ಸ್ಥಳೀಯ ಶಾಸಕರ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಪಿಡಿಓ ಶಶಿರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ವೈ.ಇ.ನಾಗೇಶ್ , ವೇಣುಗೋಪಾಲ ರೆಡ್ಡಿ, ಮುಖಂಡರಾದ ಪೃಥ್ವಿಪತಿ, ಮಲ್ಲಿಕಾರ್ಜುನ್, ಸುರೇಶ್ ಬಾಬು ಸೇರಿ ಹಲವರಿದ್ದರು