ಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮದ್ಯ ಅಬಕಾರಿ ಇಲಾಖೆ ವಶಕ್ಕೆ
ಪಟ್ಟಣದ ಹೊರವಲಯದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನೀತಿ ಸಂಹಿತೆ ಜಾರಿಯಲ್ಲಿದ್ದು, ಭಾನುವಾರ ಸಾಯಂಕಾಲ 06.30ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಅಂದಾಜು 7.86 ಲೀಟರ್ ಮದ್ಯವನ್ನು ಪೊಲೀಸ್ ಇಲಾಖೆ ಹಾಗೂ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.