ಹುಬ್ಬಳ್ಳಿ: ಕನ್ನಡದಲ್ಲಿ ವ್ಯವಹರಿಸುವುದು, ಕನ್ನಡ ನಾಡು, ನುಡಿಯ ಬಗ್ಗೆ ಗೌರವಿಸುವ ಜೊತೆಗೆ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ನಾವೆಲ್ಲರೂ ಹೆಚ್ಚು ಕ್ರಿಯಾಶೀಲರಾಗಬೇಕಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಬಂಡಿವಾಡ ಅಗಸಿಯ ನಗರ ಬಸ್ ನಿಲ್ದಾಣದಲ್ಲಿ ಗ್ರಾಮಾಂತರ ವಿಭಾಗ, ನಗರ ಸಾರಿಗೆ ವಿಭಾಗ ಹಾಗೂ ಕನ್ನಡ ಕ್ರಿಯಾ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ತಬ್ದ ಚಿತ್ರಕ್ಕೆ ಶನಿವಾರ ಬೆ. ೧೧ ಗಂಟೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯೆ ಸಮಿತಿಯ ಅಧ್ಯಕ್ಷ ಗಂಗಾಧರ ಕಮಲದಿನ್ನಿ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾ