ಬಳ್ಳಾರಿ: ಜಿಲ್ಲೆಯಲ್ಲಿ ಭಾರೀ ಮಳೆ, ಹಬ್ಬದ ಸಂಭ್ರಮಕ್ಕೆ ಕೊಂಚ ಅಡ್ಡಿ
ಬಳ್ಳಾರಿ ಜಿಲ್ಲೆ ಸೇರಿದಂತೆ ಹಲವು ತಾಲೂಕುಗಳಲ್ಲಿ ಭಾರೀ ಮಳೆಯಾಗಿದ್ದು, ಬಳ್ಳಾರಿ ನಗರದಲ್ಲಿಯೂ ಮಳೆ ಅಬ್ಬರಿಸಿದೆ. ಅ.21,ಮಂಗಳವಾರ ಮಧ್ಯಾಹ್ನ 1ಗಂಟೆ ವೇಳೆಗೆ ಸುರಿದ ಮಳೆಯಿಂದ ಹಲವು ಪ್ರದೇಶಗಳ ಚರಂಡಿಗಳು ತುಂಬಿ ಹರಿದು, ರಸ್ತೆಗಳಲ್ಲಿ ಹಳ್ಳದಂತೆ ನೀರು ಹರಿಯುತ್ತಿದೆ. ಕೆಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಬ್ಬದ ಸಂಭ್ರಮಕ್ಕೆ ಹಾಗೂ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಕಷ್ಟ ಅನುಭವಿಸುತ್ತಿದ್ದಾರೆ.