ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಂಜೆ 4.30ಕ್ಕೆ ಪ್ರವಾಸಿ ತಾಣಗಳ ಅಭಿವೃದ್ಧಿ ಬಗ್ಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಪ್ರಸ್ತುತ ಪ್ರವಾಸಿ ಚಟುವಟಿಕೆಗಳು ಹೆಚ್ಚಾಗಿದ್ದು, ಅಧಿಕ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಜಿಲ್ಲೆಯ ಬೀಚ್ಗಳಿಗೆ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಬೀಚ್ ನಲ್ಲಿ ಯಾವುದೇ ಜೀವಹಾನಿ ಸಂಭವಿಸದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.