ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಹಾಗೂ ಡಿಜಿಟಲ್ ಅಪರಾಧಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಾನೂನುಬದ್ಧ ದಿಟ್ಟ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿ ಸಾಲಿಡಾರಿಟಿ ಯೂಥ್ ಮೂವ್‍ಮೆಂಟ್ ತಾಲ್ಲೂಕು ಘಟಕ ಸ್ಥಳೀಯ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟಿಸಿತು. ಡಿಸೆಂಬರ್ 8ರಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಸೈಬರ್ ವಂಚನೆ ವಿಚಾರವನ್ನು ಆದ್ಯತೆಯಿಂದ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದರು.