ಮೊಳಕಾಲ್ಮುರು:-ಗುರುಗಳ ಆಶೀರ್ವಾದ ದೊರೆಯದೆ ಯಾವ ವ್ಯಕ್ತಿಯು ತನ್ನ ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯವಿಲ್ಲ ಎನ್ನುವುದು ಪುರಾಣಗಳ ಕಾಲದಿಂದಲೂ ಸಾಬೀತಾಗಿದೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು. ಪಟ್ಟಣದ ಶಾದಿ ಮೊಹಲ್ಲಾದಲ್ಲಿ ಶನಿವಾರ ಜಿಪಂ, ತಾಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಎಲ್ಲಾ ಸಂಘಗಳ ಆಶ್ರಯದಲ್ಲಿ ಮಾತೆ ಸಾವಿತ್ರಿ ಬಾಯಿಫುಲೆ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಅಕ್ಷರದವ್ವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.