ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ಬೆಳಗಿನ ಜಾವ 5 ಗಂಟೆಗೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ರೈಲ್ವೆ ಬ್ರಿಡ್ಜ್ ಮೇಲೆ ತರೀಕೆರೆ ಕಡೆಯಿಂದ ಬರ್ತಿದ್ದ ಬೈಕ್ ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಭದ್ರಾವತಿ ನಗರದ ಭೋವಿ ಕಾಲೋನಿಯ ದಿನೇಶ್ ಹಾಗೂ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.