ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಮಳಿಗೆಗಳ ಮೇಲೆ ದಾಳಿ
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಮಳಿಗೆಗಳ ಮೇಲೆ ಸೆಪ್ಟೆಂಬರ್ 16ರಂದು ಮಧ್ಯಾಹ್ನ 1 ಗಂಟೆಗೆ ದಾಳಿ ನಡೆಸಿದರು.ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಜಯನಗರ, ಪದ್ಮನಾಭನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿಗಳಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಅಕ್ರಮವಾಗಿ ಇರಿಸಿದ್ದ ಪ್ಲಾಸ್ಟಿಕ್ ಗೋದಾಮು ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 1300.75 ಕೆಜಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕನ್ನು ಜಪ್ತಿ ಮಾಡಿ ಮಾಲೀಕರುಗಳಿಗೆ ಒಟ್ಟಾರೆಯಾಗಿ ರೂ. 2,95,600 ಗಳನ್ನು ದಂಡ ವಿಧಿಸಲಾಯಿತು.