ಬೀದರ್: ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ; ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜ ಜಾಬಶೆಟ್ಟೆ ನೇಮಕ
Bidar, Bidar | Feb 29, 2024 ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗಿದ್ದು, ಬಸವರಾಜ ಜಾಬಶೆಟ್ಟೆಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇನ್ನೊಂದೆಡೆ ಬಸವಕಲ್ಯಾಣ ಮಾಜಿ ಶಾಸಕ ಬಿ.ನಾರಾಯಣರಾವ್ ಅವರ ಪತ್ನಿ ಮಾಲಾ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕೆಯಾಗಿ ಸರ್ಕಾರ ನೇಮಕ ಮಾಡಿದೆ. ಇವರ ಆಯ್ಕೆಗೆ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.