ಚಿತ್ರದುರ್ಗ: ಪಿಎಚ್ ಸಿ ಹಾಗೂ ಸಿಎಚ್ ಸಿ ವೈಧ್ಯರಿಗೆ ಸಾರ್ವಜನಿಕ ಸಮರ್ಪಕ ಸೇವೆ ಒದಗಿಸಲು ಚಿತ್ರದುರ್ಗ ಸಿಇಓ ಸೂಚನೆ
ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಭಾಗದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ಹಾಗೂ ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಸೂಚಿಸಿದ್ದಾರೆ.ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಆಸ್ಪತ್ರೆಯಲ್ಲಿದ್ದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು. ಕಡ್ಡಾಯವಾಗಿ ಆರೋಗ್ಯ ಸುರಕ್ಷಣಾಧಿಕಾರಿಗಳು, ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ಪ್ರಗತಿ ಪರಿಶೀಲನೆಯನ್ನು ಮಧ್ಯಾಹ್ನ ನಂತರ ನೆಡಸಬೇಕು.