ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಆಡಳಿತದಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ಸ್ಥಳಿಯ ಸಾರಂಗಮಠ-ಗಚ್ಚಿನಮಠದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ, ಜಂಗಮ ಸಮಾಜದ ಅಧ್ಯಕ್ಷ ಶಂಕ್ರಯ್ಯ ಮಠ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.