ಬಾಗಲಕೋಟೆ: ದೇವನಾಳ ಗ್ರಾಮದಲ್ಲಿ ಆಕ್ಮಸಿಕವಾಗಿ ಬೆಂಕಿ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬಾಗಲಕೋಟ ಜಿಲ್ಲೆಯ ಕಲಾದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿನ ದೇವನಾಳ ಗ್ರಾಮದಲ್ಲಿ ಶೆಡ್ಡಿನಲ್ಲಿ ನೀರು ಕಾಯಿಸುತ್ತಿದ್ದ ೮೨ ವರ್ಷದ ಮಹಿಳೆ ರಂಗವ್ವ ಮೂಲಿಮನಿ ಆಕಸ್ಮೀಕವಾಗಿ ಸೀರೆಗೆ ಬೆಂಕಿ ತಗುಲಿ ಮೈಗೆ ಹತ್ತಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಕಲಾದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಳ ಮರಣದಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕುಟುಂಬಸ್ಥರು ವರದಿಯಲ್ಲಿ ತಿಳಿಸಿದ್ದಾರೆ ಎಂದು ಸೆ.೧೫ ಸಾಯಂಕಾಲ ೬ ಗಂಟೆಗೆ ಪೋಲಿಸ್ ಮಾಹಿತಿಯಿಂದ ತಿಳಿದು ಬಂದಿದೆ.