ಭಟ್ಕಳ: ಮುರ್ಡೇಶ್ವರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ, ಕಡಲ ತೀರದ ಪಾರ್ಕಿಂಗ್ ವ್ಯವಸ್ಥೆಯ ಸುರಕ್ಷತೆಯ ಬಗ್ಗೆ ಪರಿಶೀಲನೆ
ಭಟ್ಕಳ : ತಾಲೂಕಿನ ಮುರ್ಡೇಶ್ವರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮುರ್ಡೇಶ್ವರದ ಕಡಲ ತೀರಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ ಅವರು ಕಡಲ ತೀರದ ಪಾರ್ಕಿಂಗ್ ವ್ಯವಸ್ಥೆಯ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಗರ ಅಗತ್ಯ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ನಂತರ ಅಲ್ಲಿಂದ ಹೊನ್ನಾವರ ಪೋಲೀಸ್ ಠಾಣಾ ವ್ಯಾಪ್ತಿಯ ಟ್ರಾಫಿಕ್ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಹಾಜರಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.