ಭಾಲ್ಕಿ: ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ : ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ
Bhalki, Bidar | Nov 6, 2025 ಅರಣ್ಯ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ತಾವು ಸಂಬಂಧ ಪಟ್ಟ ಜವಾಬ್ದಾರಿಯನ್ನು ಅತ್ಯಂತ ಉತ್ತಮ ರೀತಿಯಲ್ಲಿ ನಿರ್ವಹಿಸಿ ರಾಜ್ಯಕ್ಕೆ ಉತ್ತಮ ಹೆಸರು ತರುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ್ ಖಂಡ್ರೆ ಸಲಹೆ ನೀಡಿದರು. ಹಣಮಂತರಾವ್ ಚೌಹಾಣ ಅವರನ್ನು ರಾಜ್ಯ ಸರ್ಕಾರ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿ ಗುರುವಾರ ಸಂಜೆ 4:30ಕ್ಕೆ ತಮ್ಮನ್ನು ಭೇಟಿಯಾದ ಹಣಮಂತರಾವ್ ಅವರಿಗೆ ಸನ್ಮಾನಿಸಿ ಸಲಹೆ ನೀಡಿದರು.