ರಾಜ್ಯ ಸರಕಾರವು ಕಬ್ಬು ಬೆಳೆಗಾರರಿಗೆ ಮತ್ತು ಕಾರ್ಖಾನೆ ಮಾಲೀಕರಿಗೆ ಬಹಳಷ್ಟು ಸಂಗತಿಗಳನ್ನು ತಿಳಿಸಿ ಹೇಳಿದೆ. ಏನೇನು ಸಹಾಯ ಮಾಡಬಹುದೆಂದು ತಿಳಿಸಿದೆ. ಕೇಂದ್ರಕ್ಕೆ ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಿಯೋಗ ಹೋಗುವಂಥ ನಿರ್ಣಯ ತೆಗೆದುಕೊಂಡ ಮೇಲೆ ಬಹುತೇಕ ಸಕ್ಕರೆ ಕಾರ್ಖಾನೆಗಳು ಒಪ್ಪಿಗೆ ಸೂಚಿಸಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಶಿವಾನಂದ ಸರ್ಕಲ್ ನಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮಾತನಾಡಿದ ಅವರು, ಇದು ರೈತರ ಸಮಸ್ಯೆಯಾಗಿದೆ. ನೀವು ಕೇಂದ್ರದ ಕಡೆ ಹಾಗೂ ನಾವು ರಾಜ್ಯದ ಕಡೆ ಬೆಟ್ಟು ಮಾಡುವುದು ಬೇಡ ಎಂದು ನಾವು ಪ್ರಾರಂಭದಲ್ಲೇ ಮುಖ್ಯಮಂತ್ರಿಗಳಿಗೆ ವಿನಂತಿಸಿದ್ದೆವು. ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸಬೇಕಿದೆ ಎಂದು ತಿಳಿಸಿದ್ದೆವು.