ಚಳ್ಳಕೆರೆ: ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು: ನಗರದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪಾ
ಚಳ್ಳಕೆರೆ:-ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದ್ದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ತಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪ ತಿಳಿಸಿದರು. ನಗರದ ಡಿ ಸುಧಾಕರ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್ ಆರ್ ಎಸ್ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.