Public App Logo
Jansamasya
News
Bjp
National
Police
Bihar
India
जनसमस्या
कांग्रेस
भाजपा
Congress
Modi
Delhi
Viral
Jharkhand
Iyc
Bollywood
दिल्ली
Patna
Breakingnews
महिला
Narendramodi
Madhya_pradesh
सोशल_मीडिया
Mp
Madhyapradesh
Pmmodi
Rahulgandhi
Ipl
Haryana

ಶಿವಮೊಗ್ಗ: ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು, ಶಿವಮೊಗ್ಗದಲ್ಲಿ ಡಾ.ನಾಗಲಕ್ಷ್ಮಿ ಚೌಧರಿ

Shivamogga, Shimoga | Nov 24, 2025
ಹೆಣ್ಣು ಮಾತೃತ್ವದ ಅದಮ್ಯ ಶಕ್ತಿಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಸಂಜೆ 5 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಕಾಲೇಜು ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿಕ್ಷಣ ಬಹಳ ದೊಡ್ಡ ಶಕ್ತಿ ಮತ್ತು ಶಸ್ತ್ರ. ಇದರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಿದ್ದು ನೀವೆಲ್ಲಾ ಸುಶಿಕ್ಷಿತರಾಗಿ ಬದಲಾವಣೆ ತರಬೇಕೆಂದರು