ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸುಳಿಮುರ್ಕಿ ಮತ್ತು ಮೊಗೇಹಳ್ಳ ಭಾಗದಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಥಳಕ್ಕೆ ರವಿವಾರ ಸಂಜೆ 4.40ರ ಸುಮಾರು ಭೇಟಿ ನೀಡಿ ಪರಿಶೀಲಿಸಿದರು. ರಸ್ತೆ ಅಗಲೀಕರಣಕ್ಕೆ ಇರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ, ಗಿಡಗಂಟಿಗಳನ್ನು ತಕ್ಷಣ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಅವರು ಸಂಬಂಧಪಟ್ಟ ಹೆದ್ದಾರಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.