ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಗ್ರಾಮೀಣ ಮಕ್ಕಳ ಶಿಕ್ಷಣ ಕುಂಠಿತವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಾಥಮಿಕ ಶಾಲೆಗಳಲ್ಲಿ 14,139 ಶಿಕ್ಷಕರ ಹುದ್ದೆಗಳು ಹಾಗೂ ಪ್ರೌಢ ಶಾಲೆಗಳಲ್ಲಿ 3,495 ಹುದ್ದೆ"ಗಳು ಖಾಲಿ ಇವೆ ಕೂಡಲೇ ಭರ್ತಿ ಮಾಡಬೇಕು. ಸೋರುತ್ತಿರುವ ಶಾಲಾ ಕಟ್ಟಡಗಳ ದುರಸ್ತಿ, ಅಗತ್ಯ ಸೌಕರ್ಯಗಳು ಕಲ್ಪಿಸುವಂತೆ ಆಗ್ರಹಿಸಿದರು. ಶುಕ್ರವಾರ 3 ಗಂಟೆಗೆ ಪ್ರತಿಭಟನೆ ನಡೆಯಿತು...