ಬೆಂಗಳೂರು ದಕ್ಷಿಣ: ಬಿಜೆಪಿ- ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ನಗರದಲ್ಲಿ ಬಿ.ವೈ.ವಿಜಯೇಂದ್ರ
ಬಿಜೆಪಿ- ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಜಯನಗರದಲ್ಲಿ ಭೇಟಿ ಮಾಡಿದ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಿದ್ದಾಗಿ ಹೇಳಿದರು. 8-10 ದಿನಗಳಲ್ಲಿ ಕುಮಾರಸ್ವಾಮಿಯವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು. ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು,