ಆಳಂದ: ನಿಂಬಾಳ ಚೆಕ್ ಪೋಸ್ಟ್‌ಗೆ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ, ಪರಿಶೀಲನೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಅವರು ಆಳಂದ ತಾಲ್ಲೂಕಿನ ನಿಂಬಾಳ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ವಾಹನಗಳ ತಪಾಸಣೆ ಕಾರ್ಯ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಚೆಕ್ ಪೋಸ್ಟ್ ಮಾರ್ಗವಾಗಿ ಸಾಗುವ ಪ್ರತಿಯೊಂದು ವಾಹನಗಳ ತಪಾಸಣೆ ಮಾಡಬೇಕು. ಅಕ್ರಮ ಹಣ, ಮದ್ಯ, ಉಚಿತ ಉಡುಗೊರೆ ವಸ್ತುಗಳ ಸಿಕ್ಕಲ್ಲಿ ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.